2 ಸಮುಯೇಲ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯಲ್ಲಿ ತಿವಿದದರಿಂದ ಎಲ್ಲರೂ ಸತ್ತು ಬಿದ್ದರು. ಆದದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ಹದಗತ್ತಿ ಹೊಲವೆಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |