Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:18
19 ತಿಳಿವುಗಳ ಹೋಲಿಕೆ  

ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:


ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.


ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.


ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.


ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.


ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.


ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.


ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ


ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು


ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,


ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು