2 ಸಮುಯೇಲ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಅಬ್ನೇರನು, “ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು, ಸುಲಿದುಕೋ,” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಅಬ್ನೇರನು ಅವನಿಗೆ - ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಪ್ರಾಯಸ್ಥರಲ್ಲೊಬ್ಬನನ್ನು ಹಿಡಿದು ಸುಲುಕೋ ಎಂದು ಹೇಳಿದನು; ಆದರೆ ಅಸಾಹೇಲನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿ |