2 ಸಮುಯೇಲ 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅಬ್ನೇರನು ಯೋವಾಬನನ್ನು - ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿ |