Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಆ ಆಳು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರೂ ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವದನ್ನು ಆ ಮನುಷ್ಯನು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು ಹೊಲದಲ್ಲಿ ಹಾಕಿ ಅದನ್ನು ಬಟ್ಟೆಯಿಂದ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಮಾಸನು ರಸ್ತೆಯ ಮಧ್ಯದಲ್ಲಿ ತನ್ನ ರಕ್ತದಲ್ಲಿಯೇ ಬಿದ್ದಿದ್ದನು. ಅವನ ದೇಹವನ್ನು ನೋಡಲು ಜನರೆಲ್ಲರೂ ನಿಲ್ಲುತ್ತಿದ್ದರು. ಆದ್ದರಿಂದ ಆ ಯುವಕನು ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿ ಹೊಲದಲ್ಲಿಟ್ಟನು. ನಂತರ ಅವನು ಅಮಾಸನ ದೇಹದ ಮೇಲೆ ಒಂದು ವಸ್ತ್ರವನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅಮಾಸನು ರಾಜಮಾರ್ಗದೊಳಗೆ ರಕ್ತದಲ್ಲಿ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವುದನ್ನು ಆ ಮನುಷ್ಯನು ಕಂಡಾಗ, ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಹಾಕಿ, ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:12
7 ತಿಳಿವುಗಳ ಹೋಲಿಕೆ  

ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.


ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.


ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು


ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು