Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಹೆಂಗಸು ಅವರಿಗೆ - ಕೇಳಿರಿ, ದಯವಿಟ್ಟು ಕೇಳಿರಿ; ಯೋವಾಬನು ಮಾತಾಡುವದಕ್ಕೋಸ್ಕರ ನನ್ನ ಬಳಿಗೆ ಬರಬೇಕೆಂದು ಹೇಳಿರಿ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:16
7 ತಿಳಿವುಗಳ ಹೋಲಿಕೆ  

ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.


ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.


ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು