2 ಸಮುಯೇಲ 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
19 ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
19 ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.
19 ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.
19 ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.
19 ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.
ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.