Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಯೋವಾಬನು, “ಕಬಳಿಸುವುದಾಗಲಿ, ಹಾಳುಮಾಡುವುದಾಗಲಿ ನನ್ನಿಂದ ದೂರವಿರಲಿ; ಅಂಥದು ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಕ್ಕೆ ಯೋವಾಬನು - ನುಂಗಿಬಿಡುವದಾಗಲಿ ಹಾಳುಮಾಡುವದಾಗಲಿ ನನಗೆ ದೂರವಾಗಿರಲಿ; ಅಂಥದು ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:20
9 ತಿಳಿವುಗಳ ಹೋಲಿಕೆ  

ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.


ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,


ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.


ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು