Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನಂತರ ಅರಸನು ಅಮಾಸನಿಗೆ - ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನು ಅಮಾಸನಿಗೆ, “ಯೆಹೂದದ ಜನರು ನನ್ನನ್ನು ಮೂರು ದಿನಗಳಲ್ಲಿ ನೋಡುವಂತೆ ಅವರಿಗೆ ತಿಳಿಸು. ನೀನು ಸಹ ಇಲ್ಲಿಯೇ ಇರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನು ಅಮಾಸನಿಗೆ, “ನೀನು ಮೂರು ದಿವಸಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ನನ್ನ ಬಳಿಗೆ ಬಾ ಮತ್ತು ನೀನೇ ಇಲ್ಲಿ ಇರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:4
4 ತಿಳಿವುಗಳ ಹೋಲಿಕೆ  

ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.


ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.


ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು