2 ಸಮುಯೇಲ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.