2 ಸಮುಯೇಲ 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವರೆದುರಿಗೆ ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನು ಅವನನ್ನು ವಂದಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ್ದ ಕತ್ತಿ ಒರೆಯಿಂದ ಕೆಳಗೆ ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವರೆದುರಿಗೆ ಬಂದನು. ಯುದ್ಧ ವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನು ಅವನನ್ನು ವಂದಿಸುವದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ್ದ ಕತ್ತಿಯು ಒರೆಯಿಂದ ಕೆಳಗೆ ಬಿದ್ದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೋವಾಬನು ತನ್ನ ಸೈನ್ಯದೊಂದಿಗೆ ಗಿಬ್ಯೋನಿನಲ್ಲಿದ್ದ “ದೊಡ್ಡ ಕಲ್ಲಿನ” ಬಳಿಗೆ ಬಂದಾಗ, ಅಮಾಸನು ಅವರನ್ನು ಸಂಧಿಸಲು ಬಂದನು. ಯೋವಾಬನು ತನ್ನ ಸಮವಸ್ತ್ರಗಳನ್ನು ಧರಿಸಿದ್ದನು. ಸೊಂಟಪಟ್ಟಿಯನ್ನು ಕಟ್ಟಿಕೊಂಡಿದ್ದನು. ಅವನ ಖಡ್ಗವು ಒರೆಯಲ್ಲಿತ್ತು. ಅವನು ಅಮಾಸನನ್ನು ಸಂಧಿಸಲು ಮುಂದೆ ಸಾಗಿದಾಗ, ಅವನ ಖಡ್ಗವು ಒರೆಯಿಂದ ಹೊರಗೆ ಬಿದ್ದಿತು. ಯೋವಾಬನು ಖಡ್ಗವನ್ನು ಎತ್ತಿಕೊಂಡು ಅದನ್ನು ತನ್ನ ಕೈಗಳಲ್ಲಿ ಹಿಡಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಗಿಬ್ಯೋನಿನ ಸಮೀಪದಲ್ಲಿರುವ ದೊಡ್ಡ ಕಲ್ಲಿನ ಬಳಿಗೆ ಬಂದಾಗ, ಅಮಾಸನು ಅವರೆದುರಿಗೆ ಬಂದನು. ಯೋವಾಬನು ತಾನು ಧರಿಸಿದ್ದ ಅಂಗಿಯ ಮೇಲೆ ಒಂದು ನಡುಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕಠಾರಿ ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಕಠಾರಿ ಒರೆಯಿಂದ ಕೆಳಗೆ ಬಿದ್ದಿತು. ಅಧ್ಯಾಯವನ್ನು ನೋಡಿ |