2 ಸಮುಯೇಲ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯು ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕೂತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳೂ ಇರುಳಿನಲ್ಲಿ ಕಾಡುಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು. ಅಧ್ಯಾಯವನ್ನು ನೋಡಿ |