Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವದಕ್ಕೋಸ್ಕರ ಯಾಬೇಷ್‍ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ಷೆಯಾನಿನ ಬೀದಿಗಳಲ್ಲಿ ತೂಗಹಾಕಿದ್ದರು. ಯಾಬೇಷ್‍ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:12
15 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.


ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.


ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.


“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.


ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.


ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.


ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.


ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.


ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು