Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 (ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 (ಗಿಬ್ಯೋನ್ಯರು ಇಸ್ರಾಯೇಲ್‍ಕುಲಗಳಿಗೆ ಸೇರಿದವರಲ್ಲ; ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವದಿಲ್ಲವೆಂದು ಪ್ರಮಾಣ ಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದಕುಲಗಳ ಮೇಲೆ ತನಗಿದ್ದ ಅಭಿಮಾನದ ದೆಸೆಯಿಂದ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 (ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:2
13 ತಿಳಿವುಗಳ ಹೋಲಿಕೆ  

ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.


ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.


ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು