Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಇಸ್ರಾಯೇಲ್ಯರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:21
11 ತಿಳಿವುಗಳ ಹೋಲಿಕೆ  

ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.


ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.


ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.


ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”


ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.


ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು