2 ಸಮುಯೇಲ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.