Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ ಕಾಣಿಸಿಕೊಂಡನು ವಾಯುರೆಕ್ಕೆಗಳ ವೇಗದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:11
13 ತಿಳಿವುಗಳ ಹೋಲಿಕೆ  

ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.


ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.


ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.


ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು