Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:21
13 ತಿಳಿವುಗಳ ಹೋಲಿಕೆ  

ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.


ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು