Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾ ನೀತಿವಂತ, ನಿರಪರಾಧಿಯೆಂದರಿತು ನನಗಿತ್ತನಾ ಸರ್ವೇಶ್ವರ ತಕ್ಕ ಪ್ರತಿಫಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಒಳ್ಳೆಯದನ್ನೇ ಮಾಡಿದೆನು. ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:25
8 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು