Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೇವನೇ ನನಗೆ ಭದ್ರವಾದ ದುರ್ಗ ಆತನಿಂದಲೇ ಸರಾಗ ನನ್ನ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ; ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೇವರು ನನ್ನ ಬಲವೂ ಕೋಟೆಯೂ ಆಗಿದ್ದಾನೆ. ಆತನು ನನ್ನ ಮಾರ್ಗವನ್ನು ದೋಷವಿಲ್ಲದ್ದಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:33
19 ತಿಳಿವುಗಳ ಹೋಲಿಕೆ  

ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.


ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.


ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.


ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?


ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.


ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು