Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಸ್ತೋತ್ರಕ್ಕೆ ಅರ್ಹನಾಗಿದ್ದಾನೆ. ನಾನು ಸಹಾಯಕ್ಕಾಗಿ ಆತನನ್ನು ಕರೆಯುವೆನು. ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:4
20 ತಿಳಿವುಗಳ ಹೋಲಿಕೆ  

ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.


ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.


ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.


ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.


ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.


ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?


ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.


ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.


ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು