Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ ಸರ್ವೇಶ್ವರನಿಗೆ ಮೊರೆಯಿಟ್ಟರೂ ಅವರಿಗೆ ದೊರಕಲಿಲ್ಲ ಉತ್ತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವರು ಸುತ್ತಲೂ ನೋಡಿದರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:42
10 ತಿಳಿವುಗಳ ಹೋಲಿಕೆ  

ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


“ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.


ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?


ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.


ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು