Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದೀ; ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದೀ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; ನಾನು ಅರಿಯದ ಜನರು ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:44
26 ತಿಳಿವುಗಳ ಹೋಲಿಕೆ  

ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.


ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.


ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”


ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.


ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.


ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.


ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು