2 ಸಮುಯೇಲ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ದೇವನಿಗೆ ಪ್ರಾರ್ಥನೆ ಮಾಡಿದೆ ಆ ಸರ್ವೇಶ್ವರನಿಗೆ. ನನ್ನ ಕೂಗು ಕೇಳಿಸಿತು ಆತನ ಮಂದಿರದಲಿ ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿ |