Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರು ಹೋದನಂತರ ಇವನು ನಿಂತು ಕತ್ತಿ ಹಿಡಿದ ಕೈ ಸೋತು ಮರಗಟ್ಟಿ ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲ್ಯರು ಸುಲುಕೊಳ್ಳುವದಕ್ಕೋಸ್ಕರವೇ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:10
20 ತಿಳಿವುಗಳ ಹೋಲಿಕೆ  

ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.


ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.


ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,


ಅನಂತರ ಇಸ್ರಾಯೇಲರು ಹಿಂತಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು