Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಈ ನೀರನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ಜೀವದಾಶೆ ತೊರೆದವರ ರಕ್ತ! ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:17
14 ತಿಳಿವುಗಳ ಹೋಲಿಕೆ  

“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.


ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.


ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.


ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.


ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು