2 ಸಮುಯೇಲ 23:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿ |