Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮತ್ತೊಮ್ಮೆ ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:21
5 ತಿಳಿವುಗಳ ಹೋಲಿಕೆ  

ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.


ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.


ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು