Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:7
14 ತಿಳಿವುಗಳ ಹೋಲಿಕೆ  

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು


ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.


ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು