2 ಸಮುಯೇಲ 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು. ಅಧ್ಯಾಯವನ್ನು ನೋಡಿ |