Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಅವನಿಗೆ, “ನೀನು ಹೋಗಿ, ದಾವೀದನಿಗೆ ಹೋಗಿ ಹೇಳು, ‘ಯೆಹೋವನು ಹೀಗೆ ಹೇಳುತ್ತಾನೆ, ನಾನು ಮೂರು ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಒಂದನ್ನು ಆರಿಸಿಕೋ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:12
13 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,


ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.


ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು