Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:13
20 ತಿಳಿವುಗಳ ಹೋಲಿಕೆ  

‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;


“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.


ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.


“ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.


ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು