2 ಸಮುಯೇಲ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.