2 ಸಮುಯೇಲ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ - ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಾಯೇಲ್‍ಕುಲಗಳ ಎಲ್ಲಾ ಜನರನ್ನು ಲೆಕ್ಕಮಾಡಿಕೊಂಡು ಬಾ ಎಂದು ಅವನಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಾಜನಾದ ದಾವೀದನು ಸೈನ್ಯದ ಸೇನಾಧಿಪತಿಯಾದ ಯೋವಾಬನಿಗೆ, “ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಸಂಚರಿಸಿ ಜನರನ್ನು ಲೆಕ್ಕಹಾಕಿರಿ. ಆಗ ಅಲ್ಲಿ ಎಷ್ಟು ಜನರಿದ್ದಾರೆಂಬುದು ನನಗೆ ತಿಳಿಯುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿ |