Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ರಾಜನು ಅರೌನನಿಗೆ, “ಇಲ್ಲ, ನಾನು ನಿನಗೆ ಸತ್ಯವನ್ನು ಹೇಳುತ್ತಿದ್ದೇನೆ. ನಾನು ನಿನ್ನ ಭೂಮಿಗೆ ಬೆಲೆಯನ್ನು ಕೊಟ್ಟು ಕೊಂಡುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ನಾನು ನನ್ನ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. ಆದ್ದರಿಂದ ದಾವೀದನು ಕಣವನ್ನು ಮತ್ತು ಹೋರಿಗಳನ್ನು ಐವತ್ತು ಶೆಕೆಲ್‌ಗಳಿಗೆ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:24
8 ತಿಳಿವುಗಳ ಹೋಲಿಕೆ  

ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.


“ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.


ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು