Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:25
16 ತಿಳಿವುಗಳ ಹೋಲಿಕೆ  

ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.


ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.


ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು