2 ಸಮುಯೇಲ 24:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು. ಅಧ್ಯಾಯವನ್ನು ನೋಡಿ |