Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:1
26 ತಿಳಿವುಗಳ ಹೋಲಿಕೆ  

ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.


ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.


ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.


ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.


ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.


ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.


ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.


ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.


ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು