Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ದಾವೀದನ ವಿಷಯವಾಗಿ - ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವೆನೆಂದು ನುಡಿದಿದ್ದಾನಲ್ಲಾ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:18
11 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು