Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಅಬ್ನೇರನು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದನು. ಅಬ್ನೇರನು ಇಪ್ಪತ್ತು ಜನರನ್ನು ತನ್ನ ಸಂಗಡ ಕರೆದು ತಂದನು. ಅಬ್ನೇರನಿಗೂ ಅವನ ಸಂಗಡಿಗರಿಗೂ ದಾವೀದನು ಔತಣಕೂಟವನ್ನು ಏರ್ಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:20
6 ತಿಳಿವುಗಳ ಹೋಲಿಕೆ  

ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.


ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.


ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು