Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:25
16 ತಿಳಿವುಗಳ ಹೋಲಿಕೆ  

ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.


ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.


ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.


ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?


ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.


ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.


ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.


ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.


“ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?


ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು