Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:32
8 ತಿಳಿವುಗಳ ಹೋಲಿಕೆ  

ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.


ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.


ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.


ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.


ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.


ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.


ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು