2 ಸಮುಯೇಲ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಬ್ನೇರನು ಈ ಮಾತನ್ನು ಕೇಳಿ ಉರಿಗೊಂಡು ಈಷ್ಬೋಶೆತನಿಗೆ - ಈವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ವಿುತ್ರರಿಗೂ ದಯೆತೋರಿಸುತ್ತಿದ್ದೆನಲ್ಲಾ; ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವದಕ್ಕೆ ನಾನೇನು ಯೆಹೂದನಾಯಿಯ ತಲೆಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈಷ್ಬೋಶೆತನ ಮಾತುಗಳಿಂದ ಅಬ್ನೇರನು ಬಹಳ ಕೋಪಗೊಂಡನು. ಅಬ್ನೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದಕ್ಕಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದೆನೆಂದು ಹೇಳುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ? ಅಧ್ಯಾಯವನ್ನು ನೋಡಿ |