Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೌಲನ ಮಗ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೀಗೆ: ಸೌಲ ಹಾಗು ಯೋನಾತಾನರು ಸತ್ತರೆಂಬ ವರ್ತಮಾನ ಜೆಸ್ರೀಲಿನಿಂದ ಬಂದಾಗ ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿ ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕಾಲು ಮುರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೇಗಂದರೆ - ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ ಐದು ವರುಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:4
10 ತಿಳಿವುಗಳ ಹೋಲಿಕೆ  

ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.


ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.


ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.


ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.


ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.


ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು