Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದರಿಂದ ದಾವೀದನು - ಯೆಹೋವನು ನನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿ ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದನೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ನನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:12
10 ತಿಳಿವುಗಳ ಹೋಲಿಕೆ  

ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.


ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.


ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.


ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.


ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು