2 ಸಮುಯೇಲ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದಕುಲವೊಂದನ್ನೇ ಆಳಿದ್ದು ಏಳು ವರುಷವೂ ಆರು ತಿಂಗಳೂ; ಯೆರೂಸಲೇವಿುನಲ್ಲಿದ್ದುಕೊಂಡು ಯೆಹೂದ್ಯರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಆಳಿದ್ದು ಮೂವತ್ತುಮೂರು ವರುಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |