2 ಸಮುಯೇಲ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದಾವೀದನು ತನ್ನ ಜನರನ್ನು ಕರಕೊಂಡು ಯೆರೂಸಲೇವಿುನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರಲಾರನೆಂದು ನೆನಸಿ ದಾವೀದನಿಗೆ - ನೀನು ಒಳಗೆ ಬರಲಾರಿ; ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು. ಅಧ್ಯಾಯವನ್ನು ನೋಡಿ |