Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ಮಂಜೂಷ ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಅವಧಿಯಲ್ಲಿ ಸರ್ವೇಶ್ವರ ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಓಬೇದೆದೋಮನ ಮನೆಯಲ್ಲಿ ಪವಿತ್ರ ಪೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದೆದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:11
7 ತಿಳಿವುಗಳ ಹೋಲಿಕೆ  

ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.


ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು