Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:19
16 ತಿಳಿವುಗಳ ಹೋಲಿಕೆ  

ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.


ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.


ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.


ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.


ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.


ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.


ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.


ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು