Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೌಲನ ಮಗಳಾದ ಆ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಸೌಲನ ಮಗಳಾದ ಮೀಕಲಳು ತನ್ನ ಮರಣದ ದಿವಸದ ಮಟ್ಟಿಗೂ ಮಕ್ಕಳು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:23
9 ತಿಳಿವುಗಳ ಹೋಲಿಕೆ  

ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.


“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.


ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.


ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.


ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.


ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು